ಎರಡು ಗುಂಪುಗಳ ನಡುವೆ ಘರ್ಷಣೆ: ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ - Mahanayaka

ಎರಡು ಗುಂಪುಗಳ ನಡುವೆ ಘರ್ಷಣೆ: ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ

31/07/2023

ಹರ್ಯಾಣದ ಮೇವಾತ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಅಲ್ಲದೇ ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ನುಹ್ ಜಿಲ್ಲೆಯ ನಂದ್ ಗ್ರಾಮದ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿದ್ದ ರ್ಯಾಲಿಯ ಮೇಲೆ ಜನರ ಗುಂಪೊಂದು ಕಲ್ಲು ತೂರಾಟ ಮಾಡಿದೆ. ಗೋರಕ್ಷಕ ಮತ್ತು ಭಿವಾನಿ ಸಾವಿನ ಪ್ರಕರಣದ ಆರೋಪಿ ಮೋನು ಮಾನೇಸರ್ ಮೇವಾತ್‌ಗೆ ಭೇಟಿ ನೀಡಿದ್ದರು ಎಂಬ ವರದಿಗಳ ಮೇಲೆ ಹಿಂಸಾಚಾರ ಭುಗಿಲೆದ್ದಿದೆ.

ಈ ವರ್ಷದ ಫೆಬ್ರವರಿಯಲ್ಲಿ ನಾಸಿರ್ ಮತ್ತು ಜುನೈದ್ ಸಾವಿನ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಮೋನು ಮಾನೇಸರ್ ಹೆಸರನ್ನು ಉಲ್ಲೇಖಿಸಲಾಗಿದೆ. ಹರ್ಯಾಣದ ಭಿವಾನಿ ಜಿಲ್ಲೆಯ ಬೊಲೆರೊದಲ್ಲಿ ನಾಸಿರ್ ಮತ್ತು ಜುನೈದ್ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಜರಂಗದಳದ ಸದಸ್ಯರು ಮಾಡುವ ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮೋನು ಮಾನೇಸರ್ ಜನರಿಗೆ ಮನವಿ ಮಾಡಿದ್ದರು. ಆದರೆ, ಈ ಬಗ್ಗೆ ಆ ಪ್ರದೇಶದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಭೇಟಿ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸೋಮವಾರ, ಯಾತ್ರೆಯನ್ನು ಆರಂಭಗೊಂಡಾಗ ಘರ್ಷಣೆಯುಂಟಾಗಿದ್ದು, ಕಲ್ಲು ತೂರಾಟದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಕಲ್ಲು ತೂರಾಟದ ಘಟನೆಯನ್ನು ಖಚಿತಪಡಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆದ ನಂತರ ವಿಶ್ವ ಹಿಂದೂ ಪರಿಷತ್ ಸದಸ್ಯರು ಮೇವಾತ್‌ನಲ್ಲಿ ಯಾತ್ರೆ ಕೈಗೊಂಡರು. ಆದರೆ, ಯಾತ್ರೆ ನಂದ ಗ್ರಾಮಕ್ಕೆ ತಲುಪಿದಾಗ ಇತರ ಸಮುದಾಯದ ಜನರು ಕಲ್ಲು ತೂರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಮೀಪದ ಜಿಲ್ಲೆಗಳಿಂದ ಪೊಲೀಸ್ ತಂಡಗಳನ್ನು ಮೇವಾತ್‌ಗೆ ನಿಯೋಜಿಸಲಾಗುತ್ತಿದೆ ಎಂದು ಹೇಳಿದ ಅವರು, ರಸ್ತೆಗಳನ್ನು ನಿರ್ಬಂಧಿಸಿರುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಜನರಲ್ಲಿ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ