ಕಾಂಗ್ರೆಸ್ ಮುಖಂಡ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿಗೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಮಿಥುನ್ ರೈ ನಗರದ ಮೂಡುಶೆಡ್ಡೆ ಬಳಿ ತಲುಪಿದಾಗ ಬಿಜೆಪಿ ಪಕ್ಷದ ಪರ ಘೋಷಣೆ ಕೂಗಲಾಗಿದೆ ಎನ್ನಲಾಗಿದೆ.
ಈ ವೇಳೆ ಮಿಥುನ್ ರೈ ಜೊತೆಗಿದ್ದವರೂ ಸಹ ಘೋಷಣೆ ಕೂಗಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ತಕ್ಷಣವೇ ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದು, ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಕೆ.ಎಸ್.ಆರ್‌ಪಿ, ಸಿಆರ್ ಪಿಎಫ್ ತುಕಡಿ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯ ಪೊಲೀಸರು ದೌಡಾಯಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw