ಮನೆಯ ಮುಂಭಾಗ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ - Mahanayaka

ಮನೆಯ ಮುಂಭಾಗ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ

sahana
29/11/2024

ಕೊಟ್ಟಿಗೆಹಾರ: ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.


Provided by

ಮನೆ ಮುಂಭಾಗ ಎಂದಿನಂತೆ ಆಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ.

ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಇದರಿಂದಾಗಿ ಆಗಬಹುದಾಗಿದ್ದ ದೊಡ್ಡ ಅನಾಹುತದಿಂದ ಮಗು ಪರಾಗಿದೆ.


Provided by

ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು, ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿಗಳು. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ