ಆಟವಾಡುತ್ತಿದ್ದ ಬಾಲಕನ ಮೇಲೆ ಮುಗಿಬಿದ್ದ ಬೀದಿನಾಯಿಗಳು: ಬಾಲಕನ ದುರಂತ ಸಾವು
16/11/2023
ಬರೇಲಿ: ಬೀದಿ ನಾಯಿಗಳ ಕ್ರೂರ ದಾಳಿಗೆ ಸಿಲುಕಿದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
6 ವರ್ಷದ ಬಾಲಕ ದಕ್ಷ್ ಮನೆಯ ಹೊರಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಆತನ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ.
ಬೀದಿನಾಯಿಯ ಕಡಿತದಿಂದಾಗಿ ಬಾಲಕನ ಕುತ್ತಿಗೆಗೆ ಆಳವಾದ ಗಾಯವಾದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ.
ನಾಯಿಗಳ ಹಿಡಿತದಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ, ನಾಯಿಗಳು ನಿರಂತರವಾಗಿ ಆತನ ಮೇಲೆ ದಾಳಿ ನಡೆಸಿದ್ದವು. ಈ ಘಟನೆ ಶೇರ್ಘರ್ ಪ್ರದೇಶದಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿ ಮಾಡಿದೆ.