ಉಡುಪಿ: ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಂದ ಮುಷ್ಕರ
ಉಡುಪಿ, ಫೆ.1: ನೇರಪಾವತಿ ಹಾಗೂ ಖಾಯಂಗೊಳಿಸುವಂತೆ ಒತ್ತಾಯಿಸಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿಯಲ್ಲಿ ಉಡುಪಿ ಜಿಲ್ಲೆಯ ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ, ಕಾಪು ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ಗಳಲ್ಲಿ ದುಡಿಯುತ್ತಿರುವ ಕಸ ಸಾಗಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಒಳಚರಂಡಿ ಕಾರ್ಮಿಕರು ಸೇರಿದಂತೆ ನೂರಾರು ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದರು. ಇವರು ಕುಡಿಯುವ ನೀರು ಹಾಗೂ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದ್ದಾರೆ.
ಸಂಘದ ಉಡುಪಿ ಜಿಲ್ಲಾಧ್ಯಕ್ಷ ವಿನಯ ಕುಮಾರ್ ಮಾರ್ಪಳ್ಳಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ಖಾಯಂಗೊಳಿಸಬೇಕು. ತಾರತಮ್ಯ ನೀತಿಯನ್ನು ಕೈಬಿಟಟು ಕೂಡಲೇ ಬೇಡಿಕೆಯನ್ನು ಈಡೇರಿಸಬೇಕು. ನಮಗೆ ನ್ಯಾಯ ಸಿಗುವವರೆಗೆ ಈ ಮುಷ್ಕರವನ್ನು ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪೂಜಾರಿ, ಕೋಶಾಧಿಕಾರಿ ಸುದೀಪ್,ಕುಂದಾಪುರದ ಪ್ರಭಾಕರ್, ಸಾಲಿ ಗ್ರಾಮದ ವಿಕ್ಟರ್, ಕಾರ್ಕಳದ ಕೆ.ರವಿ, ನಿರಂಜನ, ಪ್ರಸಾದ ಕೊರಗ, ಪ್ರಿಯತಮ, ಮಂಜುನಾಥ್, ಹಿರಿಯ ಚಾಲಕ ರವೀಂದ್ರ ಪೂಜಾರಿ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw