ಧೂಳು ಸಹಿತ ಬಿರುಗಾಳಿ: ದೆಹಲಿಯಲ್ಲಿ 15 ವಿಮಾನಗಳ ಮಾರ್ಗ ಬದಲಾವಣೆ: ರೆಡ್ ಅಲರ್ಟ್ ಘೋಷಣೆ

ದೆಹಲಿ: ಧೂಳು ಸಹಿತ ಬಿರುಗಾಳಿ ಹಿನ್ನೆಲೆ ದೆಹಲಿಯಲ್ಲಿ 15 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯವರೆಗೆ ನಗರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈವರೆಗೆ 15 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಪ್ರತಿಕೂಲ ಹವಾಮಾನದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಘಿದೆ. ಶುಕ್ರವಾರ ಸಂಜೆ ವೇಳೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಧೂಳು ಸಹಿತ ಬಲವಾದ ಗಾಳಿ ಬೀಸಿದ್ದು, ಹಠಾತ್ ಬದಲಾವಣೆ ಗಮನದಲ್ಲಿಟ್ಟುಕೊಂಡು ಭಾರತ ಹವಾಮಾನ ಇಲಾಖೆ(ಐಎಂಡಿ) ನಗರದಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಮಂಡಿ ಹೌಸ್ ಮತ್ತು ದೆಹಲಿ ಗೇಟ್ ನಂತಹ ಪ್ರಮುಖ ಸ್ಥಳಗಳು ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಬಲವಾದ ಗಾಳಿಯಿಂದಾಗಿ ಮರಗಳ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಪರಿಣಾಮ ಹಲವಾರು ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿವೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by <

Provided by

Provided by

Provided by

Provided by
ದೆಹಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ (NCR), ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಧ್ಯಮದಿಂದ ತೀವ್ರವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಆಲಿಕಲ್ಲು ಮಳೆಯಿಂದ ಜನರು ಮತ್ತು ಜಾನುವಾರುಗಳಿಗೆ ಗಾಯಗಳಾಗುವ ಸಾಧ್ಯತೆ ಇರುವುದರಿಂದ, ಈ ಅವಧಿಯಲ್ಲಿ ತೆರೆದ ಪ್ರದೇಶಗಳಲ್ಲಿ ಉಳಿಯದಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ನಿವಾಸಿಗಳಿಗೆ ಸೂಚಿಸಿದೆ.
ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯು ಇಡೀ ದೆಹಲಿ ಮತ್ತು NCR ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಕೆಲವು ಸ್ಥಳಗಳಲ್ಲಿ ಗಾಳಿಯ ವೇಗ ಗಂಟೆಗೆ 80 ಕಿ.ಮೀ ವರೆಗೆ ತಲುಪಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: