ನನ್ನ ಕುಟುಂಬ ಉಳಿಸಿಕೊಳ್ಳಲು ಹೋರಾಟ: ರೂಪಾ ಮೌದ್ಗಿಲ್
ಬೆಂಗಳೂರು: ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಂದು ಪೋಸ್ಟ್ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.
ಮಾಧ್ಯಮಗಳ ಮುಂದೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪೆಫೋಸ್ಟ್ ಮಾಡಿದರೆ ಅಖಿಲ ಭಾರತ ಸೇವಾ ನಿಯಮ ಉಲ್ಲಂಘನೆ ಎಂದೇ ಪರಿಗಣಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ಕೊಟ್ಟರೂ ಸುಮ್ಮನಾಗದ ರೂಪಾ ಅವರು ಇಂದು ಮತ್ತೆ ರೋಹಿಣಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ಧ ನಾನು ಎತ್ತಿರುವ ಭ್ರಷ್ಟಾಚಾರದ ವಿಷಯದ ಬಗ್ಗೆ ಹೆಚ್ಚು ಚರ್ಚೆಯಾಗಬೇಕು. ಜನಸಾಮಾನ್ಯರ ಮೇಲೆ ಪ್ರಭಾವ ಬೀರುವ ಭ್ರಷ್ಟಾಚಾರ ವಿರುದ್ಧದ ಹೋರಾಟವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕರ್ನಾಟಕದ ಒಬ್ಬ ಐಎಎಸ್ ಅಧಿಕಾರಿ ಸತ್ತರು. ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಕರ್ನಾಟಕದ ಮತ್ತೊಬ್ಬ ಐಎಎಸ್ ಅಧಿಕಾರಿಯ ಕುಟುಂಬ ಈಗಾಗಲೇ ವಿಚ್ಛೇದನ ಪಡೆದಿದ್ದು, ನಾನು ಮತ್ತು ನನ್ನ ಪತಿ ಇನ್ನು ಒಟ್ಟಿಗೆ ಇದ್ದೇವೆ. ನಮ್ಮ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಈ ರೀತಿ ಅನೇಕ ಕುಟುಂಬಗಳ ನಾಶಕ್ಕೆ ಕಾರಣವಾಗುತ್ತಿರುವವರನ್ನು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನು ಹಲವು ಕುಟುಂಬಗಳು ನಾಶವಾಗುತ್ತವೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw