ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ - Mahanayaka

ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

varshini
20/03/2025


Provided by

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.


Provided by

ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಚಿಂತೆಗೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕಸಮುದ್ರದಲ್ಲಿ ಮುಳುಗಿಸಿದೆ.

ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ