ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ವಿದ್ಯಾರ್ಥಿ!
ಪುತ್ತೂರು: ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.
ಚೂರಿ ಇರಿತದ ಪರಿಣಾಮ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ವಿದ್ಯಾರ್ಥಿನಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿಗಳ ಪ್ರಕಾರ ಚೂರಿಯಿಂದ ಇರಿದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಯಾವ ಕಾರಣಕ್ಕೆ ಚೂರಿಯಿಂದ ಇರಿಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth