ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ: ಆನ್ ಲೈನ್ ಸಂವಾದ ಕಾರ್ಯಕ್ರಮದಲ್ಲಿ ಮುಜುಗರಕ್ಕೀಡಾದ ಸಚಿವ ಮಧುಬಂಗಾರಪ್ಪ
ಬೆಂಗಳೂರು: ವಿಡಿಯೋ ಕಾನ್ಫರೆನ್ಸ್ ಸಂವಾದದ ವೇಳೆ ವಿದ್ಯಾರ್ಥಿಯೊಬ್ಬ, ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದು ನೇರವಾಗಿ ಹೇಳಿದ್ದು, ಇದರಿಂದ ಸಚಿವರು ಮುಜುಗರಕ್ಕೀಡಾಗಿರುವ ಪ್ರಸಂಗ ನಡೆಯಿತು.
ವಿಧಾನ ಸೌಧದಲ್ಲಿ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿಕ್ಷಣ ಸಚಿವ ಮಧುಬಂಗಾರಪ್ಪನವರು ಸಂವಾದಲ್ಲಿ ಮಾತನಾಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಹೇಳಿದ್ದಾನೆ. ಇದರಿಂದ ಗರಂ ಆದ ಸಚಿವರು ಯಾರೋ ಅದು ಹೇಳಿದ್ದು, ನಾನೇನು ಉರ್ದು ಭಾಷೆಯಲ್ಲಿ ಮಾತನಾಡಿದ್ನಾ? ಎಂದು ಪ್ರಶ್ನಿಸಿದರು.
ಬಳಿಕ ಯಾರು ನೋಡಿ ರೆಕಾರ್ಡ್ ಮಾಡಿ ಅವರ ಮೇಲೆ ಕ್ರಮಕೈಗೊಳ್ಳಿ ಎಂದು ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಿಗೆ ಸೂಚಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: