ಸ್ನೇಹಿತರ ಜೊತೆಗೆ ಗೋವಾಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಚಾಲಕನಿಂದ ಅತ್ಯಾಚಾರ! - Mahanayaka

ಸ್ನೇಹಿತರ ಜೊತೆಗೆ ಗೋವಾಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಚಾಲಕನಿಂದ ಅತ್ಯಾಚಾರ!

bus driver arest
30/12/2022

ಪಣಜಿ: ಕ್ರಿಸ್ ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆಗೆ ತೆರಳಿದ್ದ ವಿದ್ಯಾರ್ಥಿಯೋರ್ವಳ ಮೇಲೆ ಬಸ್ ಚಾಲಕ ಅತ್ಯಾಚಾರ ನಡೆಸಿದ ಘಟನೆ ಗೋವಾದಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಮೂಲದ ವಿದ್ಯಾರ್ಥಿನಿ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವಾಸ್ಕೋದ ಜುವಾರಿನಗರದ ನಿವಾಸಿ ಆರೋಪಿ ಕಳೆದ ಶನಿವಾರ ಈ ಕೃತ್ಯ ಎಸಗಿದ್ದಾನೆ.
ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತೆಯರು ಮದ್ಯಪಾನ ಮಾಡಲು ಆರಂಭಿಸಿದ್ದರು. ಈ ವೇಳೆ ವಿದ್ಯಾರ್ಥಿನಿ ಬಸ್ ಗೆ ವಾಪಸ್ ಬಂದಿದ್ದಾಳೆ. ಈ ಸಂದರ್ಭದಲ್ಲಿ ಬಸ್ ಚಾಲಕ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಆರೋಪಿ ಬಸ್ ಚಾಲಕನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ