ಕಾಲೇಜಿನ ಕ್ಯಾಂಪಸ್ ನಿಂದ ಮಸೀದಿಯನ್ನು ತೆರವುಗೊಳಿಸಿ: ವಿದ್ಯಾರ್ಥಿಗಳ ಪ್ರತಿಭಟನೆ
ವಾರಣಾಸಿಯ ಉದಯ ಪ್ರತಾಪ್ ಕಾಲೇಜಿನ ಕ್ಯಾಂಪಸ್ ನಿಂದ ಮಸೀದಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಒಂದು ಗುಂಪು ಪ್ರತಿಭಟನೆ ನಡೆಸಿದೆ. ಸುಮಾರು ನೂರರಷ್ಟು ವಿದ್ಯಾರ್ಥಿಗಳು ಕ್ಯಾಂಪಸ್ ಗೇಟಿನ ಬಳಿ ನಿಂತು ಜೈ ಶ್ರೀರಾಮ್ ಎಂದು ಘೋಷಿಸಿದ್ದಾರೆ ಮತ್ತು ಕೇಸರಿ ಬಾವುಟವನ್ನು ಪ್ರದರ್ಶಿಸಿದ್ದಾರೆ. ಅವರು ಕ್ಯಾಂಪಸ್ ಒಳ ನುಗ್ಗಲು ಪ್ರಯತ್ನಿಸಿದರಾದರೂ ಪೊಲೀಸರು ಅವರನ್ನು ತಡೆದಿದ್ದಾರೆ.
ಈ ಮಸೀದಿ ಇರುವ ಜಾಗವು ವಕ್ಫ್ ನದ್ದು ಅಲ್ಲವೆಂದಾದರೆ ಅದನ್ನು ತೆರವುಗೊಳಿಸಬೇಕು ಎಂದು ವಿದ್ಯಾರ್ಥಿ ನಾಯಕ ವಿವೇಕಾನಂದ ಸಿಂಗ್ ಆಗ್ರಹಿಸಿದ್ದಾರೆ. ಇನ್ನು ಮುಂದೆ ಈ ಮಸೀದಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುವುದಾದರೆ ನಾವು ಹನುಮಾನ್ ಚಾಲೀಸಾ ಪಠಿಸುತ್ತೇವೆ ಎಂದವರು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಪ್ರತಿಭಟನೆ ನಡೆದ ಬಳಿಕ ಮಸೀದಿಗೆ ಹೊರಗಿನವರು ಬರದಂತೆ ತಡೆಯಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ನಮಾಜ್ ಮಾಡುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಎಸಿಪಿ ತಿಳಿಸಿದ್ದಾರೆ.
ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಸ್ಟೂಡೆಂಟ್ ಕೋರ್ಟ್ ಎಂಬ ಗುಂಪನ್ನು ರಚಿಸಿಕೊಂಡಿದ್ದಲ್ಲದೇ 11 ವಿಷಯಗಳ ಪಟ್ಟಿ ಮಾಡಿದ್ದು, ಇವುಗಳ ಮೇಲೆ ಸ್ಪಷ್ಟೀಕರಣ ನೀಡಬೇಕು ಎಂದು ಉತ್ತರ ಪ್ರದೇಶದ ವಕ್ಫ್ ಬೋರ್ಡಗೆ ಪತ್ರ ಬರೆದಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಸೆಂಟ್ರಲ್ ವಕ್ಫ್ ಬೋರ್ಡ್ ಈ ಬಗ್ಗೆ ಸ್ಪಷ್ಟಿಕರಣ ನೀಡಿದ್ದು, ಮಸೀದಿಯ ವಕ್ಫ್ ಮಾನ್ಯತೆಯನ್ನು 2021 ಜನವರಿ 18ರಂದು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj