ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮನವಿ
ಸಿದ್ದರಾಮಯ್ಯ ಪ್ರಮಾಣ ವಚನದ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಲು ಪೊಲೀಸರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದು, ಕಂಠೀರವ ಕ್ರೀಡಾಂಗಣ ಬಳಿಯ ಪರೀಕ್ಷಾ ಕೇಂದ್ರಗಳಲ್ಲಿಯೇ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಕಾಲೇಜು ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಮಾಣ ವಚನ ಸಮಾರಂಭದಿಂದಾಗಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಆಗದಂತೆ ಪೊಲೀಸರು ಎಚ್ಚರಿಕೆಯಿಂದ ಕ್ರಮಕೈಗೊಳ್ಳಬೇಕು. ಪ್ರಮಾಣ ವಚನ ಸಮಾರಂಭದ ಕಾರಣದಿಂದಾಗಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ. ಸಮಾರಂಭಕ್ಕೆ ಆಗಮಿಸುವವರು ಪೊಲೀಸರಿಗೆ ಸಹಕಾರ ನೀಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ ವಿದ್ಯಾರ್ಥಿಗಳಿಗೆ ಸಹಾಯ ಬೇಕಾದಲ್ಲಿ ಪೊಲೀಸರಿಗೆ ಕರೆ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಎಲ್ಲೆಲ್ಲಿ ಸಂಚಾರ ಮಾರ್ಗ ಬದಲಾವಣೆ:
ಲ್ಯಾವೆಲ್ಲೆ ರಸ್ತೆ ಅಥವಾ ಕ್ವೀನ್ಸ್ ರಸ್ತೆಯ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳು ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಕೆ.ಆರ್.ವೃತ್ತ ಮೂಲಕ ಸಂಚರಿಸಬೇಕಿದೆ. ಸಿಟಿಒ ಸರ್ಕಲ್ನಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ಸರ್ಕಲ್ ಕಡೆಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಲಸೂರು ಗೇಟ್ನಿಂದ ಸಿದ್ದಲಿಂಗಯ್ಯ ವೃತ್ತದ ಕಡೆ ತೆರಳುವ ವಾಹನಗಳು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧ ಹೇರಲಾಗಿದ್ದು, ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನ, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw