ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಾಂತಲಾ ದಾಮ್ಲೆ ಅವರಿಂದ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಈಗಾಗಲೇ ನಾಮಪತ್ರ ಸಲ್ಲಿಕೆ ಅವಧಿ ಶುರುವಾಗಿದ್ದು, ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಶಾಂತಲಾ ದಾಮ್ಲೆ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಆಪ್ ಅಭ್ಯರ್ಥಿ ಶಾಂತಲಾ ದಾಮ್ಲೆ ಸೇರಿದಂತೆ ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಇರುವ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಪೂಜೆಯನ್ನ ಸಲ್ಲಿಸಿದ್ದಾರೆ. ಬಳಿಕ ಎಲ್ಲಾರಿಗೂ ಸಿಹಿಯನ್ನ ಹಂಚಿ ದೇವಸ್ಥಾನದಿಂದ ನೂರಾರು ಕಾರ್ಯಕರ್ತರೆಲ್ಲಾ ಸೇರಿ ರ‍್ಯಾಲಿ ಹಾಗೂ ಕಾಲ್ನಡಿಗೆ ಮೂಲಕ ಮಹಾಲಕ್ಷ್ಮೀಪುರ 2ನೇ ಅಡ್ಡರಸ್ತೆ, ಪೈಪ್‌ಲೈನ್ ರೋಡ್‌ನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರವನ್ನ ಸಲ್ಲಿಸಿದ್ದಾರೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಾಂತಲಾ ದಾಮ್ಲೆ ಇಂದು ನಾಮಪತ್ರವನ್ನ ಸಲ್ಲಿಸುತ್ತಿದ್ದೇನೆ. ಕಳೆದ ಎರೆಡುವರೆ ವರ್ಷದಿಂದ ನಾವು ಈ ಕ್ಷೇತ್ರದಲ್ಲಿ ಪ್ರತಿಯೊಂದು ಮನೆಗೂ ಸತತ 5 ಬಾರೀ ಹೋಗಿ ಅವರ ಸಮಸ್ಯೆಗಳಿಗೆ ಆಲಿಸಿದ್ದೇವೆ.
ಎಲ್ಲರುಹೇಳುತ್ತಿರುವುದು ಒಂದು ನಿಮಗೆ ಈ ಬಾರೀ ನಮ್ಮ ಬೆಂಬಲವನ್ನ ನೀಡಿ ಅವಕಾಶವನ್ನ ನೀಡುತ್ತೇವೆ. ನಮಗೂ ಬದಲಾವಣೆ ಬೇಕಾಗಿದೆ. ಹಾಗಾಗಿ ಚುನಾವಣೆಯಲ್ಲಿ ಪೊರಕೆ ಗುರುತಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw