ಸುದ್ದಿ ಸಂಸ್ಥೆಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಪತ್ರಕರ್ತ

ಚೆನ್ನೈ: ತಮಿಳುನಾಡಿನ ಯುಎನ್ ಐ ಸುದ್ದಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಫೋಟೋ ಜರ್ನಲಿಸ್ಟ್ ಟಿ. ಕುಮಾರ್ ಅವರು ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹಿರಿಯ ಫೋಟೊ ಜರ್ನಲಿಸ್ಟ್ , 56 ವರ್ಷ ವಯಸ್ಸಿನ ಕುಮಾರ್ ಅವರು ಕಳೆದ ಕೆಲ ದಿನಗಳಿಂದ ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದರು. ಅವರು ಕೆಲಸ ಮಾಡುತ್ತಿದ್ದ ಕಂಪನಿಯು ಅವರಿಗೆ ಸರಿಯಾಗಿ ಸಂಬಳ ನೀಡಿರಲಿಲ್ಲ, ಸಾಕಷ್ಟು ಸಂಬಳ ಬಾಕಿ ಇತ್ತು ಎನ್ನಲಾಗಿದೆ.
ನಿನ್ನೆ ರಾತ್ರಿ ಚೆನ್ನೈನ, ನುಂಗಂಬಾಕ್ಕಂನಲ್ಲಿರುವ ಏಜೆನ್ಸಿಯ ಕಚೇರಿಯಲ್ಲಿ ಕುಮಾರ್ ಅವರು ಸೀಲಿಂಗ್ ಹುಕ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣವೇ ಕುಮಾರ್ ನ್ನು ಆಸ್ಪತ್ರೆಗೆ ದಾಖಲಿಸಿದರು, ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಟಿ.ಕುಮಾರ್ ಅವರಿಗೆ ಮಾಧ್ಯಮ ಕ್ಷೇತ್ರದಲ್ಲಿ 30 ವರ್ಷಗಳ ಅನುಭವವಿದೆ. 1986 ರಲ್ಲಿ ಯುಎನ್ ಐ ಸುದ್ದಿ ಸಂಸ್ಥೆಗೆ ಫೋಟೊ ಜರ್ನಲಿಸ್ಟ್ ಆಗಿ ಸೇರಿದ ಅವರು ಉತ್ತಮ ಸ್ಥಾನ ತಲುಪಿದ್ದರು. ಅಷ್ಟೇ ಅಲ್ಲಾ ಏಜೆನ್ಸಿಯೊಂದರ ರಾಜ್ಯ ಬ್ಯೂರೋ ಮುಖ್ಯಸ್ಥ ರಾದ ಮೊದಲ ಛಾಯಾಗ್ರಾಹಕ ಎಂದು ಪ್ರಸಿದ್ಧಿ ಪಡೆದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸದನದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಖಾದರ್‌ಗೆ ಮೈಸೂರು ಇತಿಹಾಸ ಗೊತ್ತಿಲ್ಲ: ಸಂಸದ ಪ್ರತಾಪ್ ಸಿಂಹ
ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ: ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು
ಮೋದಿ ಸರ್ಕಾರ ಕಿತ್ತೊಗೆಯುವ ಸಮಯ ಹತ್ತಿರವಾಗಿದೆ: ತೆಲಂಗಾಣ ಸಿಎಂ ಕೆಸಿಆರ್