10:28 PM Wednesday 12 - March 2025

ಬ್ರೇಕಿಂಗ್ ನ್ಯೂಸ್:  ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರು

dr sudhakar k
27/05/2021

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ.

ಇತ್ತೀಚೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ವಿವಿಧ ಜಿಲ್ಲೆಗಳ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ, ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಆಕ್ಸಿಜನ್ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದರು.

ಇದರ ಬೆನ್ನಲ್ಲೇ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಸದಾಶಿವ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

Exit mobile version