ಗುರುವಾಯನಕೆರೆಯ ಕೆರೆಗೆ ಹಾರಿ ಆತ್ಮಹತ್ಯೆ ಪ್ರಕರಣ: ಆಟೋ ಚಾಲಕನ ಮೃತದೇಹ ಪತ್ತೆ
ಬೆಳ್ತಂಗಡಿ: ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.
ಸ್ಥಳೀಯ ರಿಕ್ಷಾ ಡ್ರೈವರ್ ಪ್ರವೀಣ್ ನ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು, ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈಗಾಗಲೇ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಇದೀಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಶವವನ್ನು ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಸಾಗಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಪ್ರವೀಣ ವ್ಯಕ್ತಿಯೊಬ್ಬರಿಗೆ ಬೆಳಗ್ಗೆ ನಾಲ್ಕು ಗಂಟೆಗೆ ಕರೆ ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು ಎಂದು ತಿಳಿದು ಬಂದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಒಟ್ಟು ಘಟನೆಯ ಬಗ್ಗೆ ಹಲವಾರು ಅನುಮಾನಗಳಿದ್ದು ಪೊಲೀಸರು ಎಲ್ಲ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರವೀಣ್ ಪತ್ನಿ ಏಳು ತಿಂಗಳ ಗರ್ಭಿಣಿ ಕೂಡ ಆಗಿದ್ದಾರೆ. ಆತ್ಮಹತ್ಯೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka