ಸುಳ್ಳು ಹೇಳಿ ಯುವಜನರ ದಿಕ್ಕು ತಪ್ಪಿಸುತ್ತಿದ್ದಾರೆ | ಚಕ್ರವರ್ತಿ ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಚಳುವಳಿ!
ಶಿವಮೊಗ್ಗ: ಬಿಜೆಪಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸುಳ್ಳು ಭಾಷಣದ ಮೂಲಕ ಜನರು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ವಿಶೇಷ ಉಪನ್ಯಾಸಕ್ಕಾಗಿ ಶಿವಮೊಗ್ಗಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ ಸಂದರ್ಭದಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಿದರು.
ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ “ಒಂದು ದೇಶ ಒಂದು ಚುನಾವಣೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ್ದು, ಈ ವೇಳೆ ಕಾಂಗ್ರೆಸ್ ಪರ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯುಐ ಕಾರ್ಯಕರ್ತರು ಗೋ ಬ್ಯಾಕ್ ಸೂಲಿಬೆಲೆ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು.
ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಎನ್ ಎಸ್ ಯು ಐ ಕಾರ್ಯಕರ್ತರು, ಸುಳ್ಳು ಭಾಷಣಗಳನ್ನು ಮಾಡಿ, ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೆಹರೂ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಎನ್ ಎಸ್ ಯುಐ ಯತ್ನಿಸಿದ್ದು, ಈ ವೇಳೆ ಜಿಲ್ಲಾ ಮುಖಂಡರಾದ ಚೇತನ್ ಗೌಡ, ಬಾಲಾಜಿ ಸೇರಿದಂತೆ ಹಲವಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವತಿ-ಆಂಟಿಯರೇ ಇವರ ಟಾರ್ಗೆಟ್ | ನಂಬರ್ ಪಡೆದ ಬಳಿಕ ಇವರು ಆಡಿದ್ದೇ ಆಟ!