ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕ್ರಮ | ಸಚಿವ ರವಿಶಂಕರ್ ಪ್ರಸಾದ್ - Mahanayaka
10:16 AM Wednesday 5 - February 2025

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕ್ರಮ | ಸಚಿವ ರವಿಶಂಕರ್ ಪ್ರಸಾದ್

11/02/2021

ನವದೆಹಲಿ: ಸುಳ್ಳು ಸುದ್ದಿಗಳನ್ನು ಹಬ್ಬಿಸಿ, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ನಾವು ಸಾಮಾಜಿಕ ಮಾಧ್ಯಮಗಳನ್ನು ತುಂಬಾ ಗೌರವಿಸುತ್ತೇವೆ. ಅವುಗಳಿಂದ ಸಾಮಾನ್ಯ ಜನರಿಗೆ ಸಹಾಯವಾಗುತ್ತಿದೆ. ಡಿಜಿಟಲ್ ಇಂಡಿಯಾ ಅಭಿಯಾನದಲ್ಲಿ ಸಾಮಾಜಿಕ ಮಾಧ್ಯಮಗಳು ದೊಡ್ಡ ಪಾತ್ರ ವಹಿಸಿವೆ. ಆದರೆ, ನಕಲಿ ಸುದ್ದಿಗಳನ್ನು ಹರಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಟ್ವಿಟರ್ ಜೊತೆಗಿನ ಜಟಾಪಟಿ ಕುರಿತು ಮಾತನಾಡಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ಇಬ್ಬಗೆಯ ನೀತಿಯನ್ನು ಭಾರತದಲ್ಲಿ ಅನುಮತಿಸಲಾಗದು. ಟ್ವಿಟರ್, ಫೇಸ್‌ಬುಕ್, ಲಿಂಕ್ಡ್‌ಇನ್ ಸೇರಿದಂತೆ ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳು ತಪ್ಪು ಮಾಡಿದ್ದಲ್ಲಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ