ಏಪ್ರಿಲ್ 24ರಿಂದ ಮೇ 20ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ
ಬೆಂಗಳೂರು: ಹೈಕೋರ್ಟ್‌ಗೆ ಇದೇ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.
‘ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕ ಆದೇಶ ಸೇರಿದಂತೆ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ.
ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ’ ಎಂದು ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw