ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ! - Mahanayaka

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ!

sunil bajilakeri
08/10/2022

ಫೇಸ್ ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಜಡ್ಜ್ ಮುಂದೆ ಹಾಜರುಪಡಿಸಿದ್ರು. ವಿಚಾರಣೆ ನಡೆಸಿದ ಜಡ್ಜ್ ಜಾಮೀನು ನೀಡಿದ್ದಾರೆ.


Provided by

ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಉರ್ವ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು.

ಇವರ ವಿರುದ್ಧ ಉರ್ವ, ಬಜ್ಪೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. ಸಂಘ ಪರಿವಾರದ ಮಾಜಿ ಕಾರ್ಯಕರ್ತರಾಗಿರೋ ಸುನೀಲ್ ಬಜೀಲಕೇರಿಯವ್ರು ಪ್ರಸಕ್ತ  ಬಿಜೆಪಿ ನಾಯಕರ ಕಾರ್ಯವೈಖರಿಯ ಕಟುಟೀಕಾಕಾರರಾಗಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ