ಶೀಘ್ರದಲ್ಲೇ ಭೂಮಿಗೆ ವಾಪಸ್ ಆಗಲಿದ್ದಾರೆ ಗಗನಯಾತ್ರಿ ಸುನೀತಾ ವಿಲಿಯಮ್ಸ್: ಮರಳಿ ಬಂದ್ರೂ ಭೂಮಿಯಲ್ಲಿ ಬದುಕೋದೇ ಕಷ್ಟನಾ?

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ಈ ಗಗನಯಾತ್ರಿಗಳಿಗೆ ಭೂಮಿಗೆ ಬಂದ ಮೇಲೆ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.
ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಈ ಮೊದಲು ಮಾರ್ಚ್ 19 ರ ಬೆಳಿಗ್ಗೆ 3:27ಕ್ಕೆ ಭೂಮಿಗೆ ಮರಳುವುದಾಗಿ ನಿಗದಿಯಾಗಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಮಾಚ್ 18ರ 6 ಗಂಟೆ ಸುಮಾರಿಗೆ ಫ್ಲೋರಿಡಾ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆಯಲ್ಲಿ ಇಳಿಯಬಹುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.
ಮಂಗಳವಾರ ಭೂಮಿಗೆ ಮರಳಲಿದ್ದಾರೆ. ಈ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆ ಭಾನುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದೆ.
ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶದಲ್ಲಿರುವ ಈ ಗಗನಯಾತ್ರಿಗಳಿಗೆ ಭೂಮಿಗೆ ಬಂದ ಮೇಲೆ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗಲಿದೆ. ಹೀಗಾಗಿ ವಿಲಿಯಮ್ಸ್, ವಿಲ್ಮೋರ್ ಇಬ್ಬರು ದೈಹಿಕ ತೊಂದರೆಗಳನ್ನ ಅನುಭವಿಸಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj