ಧ್ರುವ ಪುತ್ರಗೆ ಟಿಕೆಟ್ ಕೊಡುವಂತೆ ಬೆಂಬಲಿಗರ ಘೋಷಣೆ: ಸಿದ್ದು, ಡಿಕೆಶಿಗೆ ಆಗ್ರಹ

dhruvanarayan
12/03/2023

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಇಂದು ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯುವ ವೇಳೆ ಅಭಿಮಾನಿಗಳು ದೊಡ್ಡ ಹೈಡ್ರಾಮವನ್ನೇ ಸೃಷ್ಟಿ ಮಾಡಿದ್ದರು.

ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರದಿಂದ ಕೈ ಟಿಕೆಟ್ ಕೊಡಬೇಕೆಂದು ಒಂದೇ ಸಮನೇ ಘೋಷಣೆಗಳನ್ನು ಕೂಗಿದರು. ಧ್ರುವ ಅವರ ಟಿಕೆಟ್ ನ್ನು ಅವರ ಮಗನಿಗೆ ಕೊಡಬೇಕೆಂದು ಅರ್ಧ ತಾಸಿಗಿಂತಲೂ ಹೆಚ್ಚು ಕಾಲ ಘೋಷಣೆ ಕೂಗಿದರು.

ಸಿದ್ದರಾಮಯ್ಯ, ಡಿಕೆಶಿ, ಪರಂ ಕೈ ಮುಗಿದು ಸಮಾಧಾನದಿಂದ ಇರುವಂತೆ ಮನವಿ ಮಾಡಿದರೂ ಸುಮ್ಮನಾಗದ ಕಾರ್ಯಕರ್ತರು ಟಿಕೆಟ್ ಗೆ ಒತ್ತಾಯಿಸಿ ಘೋಷಣೆ ಕೂಗಿದರು.‌ಅಂತಿಮ ಕ್ರಿಯೆ ವೇಳೆಯೂ ದರ್ಶನ್ ಮುಂದಿನ ಎಂಎಲ್ಎ, ಬೇಕೆ ಬೇಕು ಟಿಕೆಟ್ ಬೇಕು ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version