ಬಹುಸಂಖ್ಯಾತರ ಇಚ್ಛೆಯಂತೆ ದೇಶ ನಡಿತಿದೆ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್
ಈ ತಿಂಗಳ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶವು “ಬಹುಸಂಖ್ಯಾತರ ಇಚ್ಛೆಯಂತೆ” ಕಾರ್ಯನಿರ್ವಹಿಸಬೇಕು ಎಂಬ ಅವರ ಹೇಳಿಕೆಯನ್ನು ವಿವರಿಸಲು ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್ ನೀಡಿದೆ.
ಮೂಲಗಳ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಮಂಗಳವಾರ (ಡಿಸೆಂಬರ್ 17) ಸುಪ್ರೀಂ ಕೋರ್ಟ್‌ನ ಚಳಿಗಾಲದ ವಿರಾಮಕ್ಕೆ ಮುಂಚಿತವಾಗಿ ಸಭೆ ಸೇರಲಿದೆ.
ಡಿಸೆಂಬರ್ 8 ರಂದು ಪ್ರಯಾಗ್ರಾಜ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಯಾದವ್ ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸಿ “ಇದು ಕಾನೂನು… ವಾಸ್ತವವಾಗಿ, ಕಾನೂನು ಬಹುಮತಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಕುಟುಂಬ ಅಥವಾ ಸಮಾಜದ ಹಿನ್ನೆಲೆಯಲ್ಲಿ ನೋಡಿ..” ಎಂದು ಹೇಳಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj