ಇಸ್ರೇಲ್‌ಗೆ ಶಸ್ತ್ರಾಸ್ತ್ರ ನೀಡುವುದನ್ನು ತಡೆಯಬೇಕು: ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾ
ಗಾಝಾದಲ್ಲಿ ಇಸ್ರೇಲ್ ನರಮೇಧವನ್ನು ನಡೆಸುತ್ತಿದೆ. ಆದ್ದರಿಂದ ಭಾರತ ಮತ್ತು ಭಾರತೀಯ ಕಂಪನಿಗಳು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ನೆರವು ನೀಡುವುದನ್ನು ತಡೆಯಬೇಕೆಂದು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾ ಮಾಡಿದೆ.
ರಾಷ್ಟ್ರದ ವಿದೇಶಾಂಗ ನೀತಿಯ ಅಖಾಡಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳ ರಫ್ತಿನಲ್ಲಿ ತೊಡಗಿರುವ ಭಾರತೀಯ ಸಂಸ್ಥೆಗಳು ರಫ್ತಿನ ಮೇಲೆ ಹಿಡಿತ ಸಾಧಿಸಿದರೆ ಒಪ್ಪಂದದ ಬಾಧ್ಯತೆಗಳ ಉಲ್ಲಂಘನೆಗಾಗಿ ಮೊಕದ್ದಮೆ ಹೂಡಬಹುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ರ ಉನ್ನತ ನ್ಯಾಯಾಲಯದ ಪೀಠವು ಅರ್ಜಿ ವಿಚಾರಣೆ ನಡೆಸುತ್ತಿದೆ. ವಕೀಲ ಪ್ರಶಾಂತ್ ಭೂಷಣ್ ಮೂಲಕ ಅಶೋಕ್ ಕುಮಾರ್ ಶರ್ಮಾ ಮತ್ತು ಇತರರು ಸಲ್ಲಿಸಿರುವ ಅರ್ಜಿಯಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಇತರ ಮಿಲಿಟರಿ ಉಪಕರಣಗಳನ್ನು ರಫ್ತು ಮಾಡುವ ಭಾರತೀಯ ಸಂಸ್ಥೆಗಳಿಗೆ ಪರವಾನಗಿಗಳನ್ನು ರದ್ದುಗೊಳಿಸಲು ಮತ್ತು ಹೊಸದನ್ನು ನೀಡದಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಗಾಜಾದಲ್ಲಿ ಇಸ್ರೇಲ್ ನರಮೇಧವನ್ನು ನಡೆಸುತ್ತಿದೆ. ಆದ್ದರಿಂದ ಭಾರತೀಯ ಶಸ್ತ್ರಾಸ್ತ್ರ ರಫ್ತುಗಳು ಜನಾಂಗೀಯ ಹತ್ಯೆಯ ಅಪರಾಧದ ತಡೆಗಟ್ಟುವಿಕೆ ಮತ್ತು ಶಿಕ್ಷೆಯ ಮೇಲಿನ ಒಪ್ಪಂದದ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth