ಪೆಗಾಸಸ್ ಗೂಢಚಾರಿಕೆ ವಿರುದ್ಧ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್ | ಕೇಂದ್ರ ಸರ್ಕಾರಕ್ಕೆ ಹಿನ್ನಡೆ
ನವದೆಹಲಿ: ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದ್ದು, ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೇಂದ್ರ ಸರ್ಕಾರ ವಾದಿಸಿದ್ದು, ಈ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ನೀಡಿದ್ದೇವೆ ಎಂದು ಹೇಳಿದೆ.
ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್ , ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು ಎಂದು ಹೇಳಿದೆ.
ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಪರಿಣಾಮ ಬೀರುತ್ತೆ. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ಖಾಸಗಿತನದ ಹಕ್ಕು ಅನ್ನು ಅತಿಕ್ರಮಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಡೆಗಣಿಸಲಾಗಲ್ಲ. ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸಲು ಮಸೂದೆ ಪಾಸ್ ಆಗಬೇಕು. ಸಾಂವಿಧಾನಿಕ ಅಗತ್ಯದ ಪರೀಕ್ಷೆ ಪಾಸ್ ಆಗಬೇಕು ಎಂದು ಸುಪ್ರೀಂಕೋರ್ಟ್ ಸಿಜೆ ನೇತೃತ್ವದ ಪೀಠ ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka