ಉತ್ತರ ಪ್ರದೇಶ ಪೊಲೀಸರಿಗೆ 50 ಸಾವಿರ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಿವಿಲ್ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ.
ಸಿಜೆಐ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಸಿವಿಲ್ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ತಪ್ಪು, ಈ ನಡೆ ಸ್ವೀಕಾರಾರ್ಹವಲ್ಲ ಎಂದಿದೆ.
ಸಿವಿಲ್ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣಗಳನ್ನಾಗಿ ಪರಿವರ್ತಿಸುತ್ತಿರುವುದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗುತ್ತಲೇ ಇವೆ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಈ ಹಿಂದೆಯೂ ಸಿವಿಲ್ ಪ್ರಕರಣವೊಂದನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸಿದ್ದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ನೆಲಕಚ್ಚಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: