ವೈದ್ಯಕೀಯ ಕೋರ್ಸ್: ಒಬಿಸಿಗಳಿಗೆ ಶೇ. 27, ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಗೆ ಸುಪ್ರೀಂಕೋರ್ಟ್ ಅನುಮತಿ
ನವದೆಹಲಿ: ವೈದ್ಯಕೀಯ ಕೋರ್ಸ್‌ಗಳಿಗೆ ಅಖಿಲ ಭಾರತ ಕೋಟಾದಲ್ಲಿ ಒಬಿಸಿಗಳಿಗೆ ಶೇ. 27 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಗೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಇದೇ ವೇಳೆ ಕೋರ್ಟ್, ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ, ಬದಲಿಗೆ ಅದರ ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಕಪೀಠ, ಸ್ಪರ್ಧಾತ್ಮಕ ಪರೀಕ್ಷೆಗಳು ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ. ಅದು ಕೆಲವು ವರ್ಗಗಳಿಗೆ ಸೇರಿದೆ. ಅರ್ಹತೆ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು ಎಂದಿದೆ.
ತನ್ನ ನಿರ್ಧಾರಕ್ಕೆ ವಿವರವಾದ ಕಾರಣಗಳನ್ನು ನೀಡಿದ ಸರ್ವೋಚ್ಚ ನ್ಯಾಯಾಲಯ, ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ. ಆದರೆ ಅದು ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.
2021ರ ಜುಲೈ 29 ರಂದು ನೀಟ್‌ನಲ್ಲಿ ಅಖಿಲ ಭಾರತ ಕೋಟಾದಡಿ ಒಬಿಸಿ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಕ್ರಮವಾಗಿ ಶೇ.27, ಶೇ.10 ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದನ್ನು ಪ್ರಶ್ನಿಸಿ ನೀಲ್ ಆರೆಲಿಯೊ ನ್ಯೂನ್ಸ್ ನೇತೃತ್ವದ ಅರ್ಜಿದಾರರ ಗುಂಪು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯ ಯಶಸ್ವಿ ಪರೀಕ್ಷೆ
ಬಂಟ್ವಾಳ: ಡೆತ್ ನೋಟು ಬರೆದಿಟ್ಟು ಪಟ್ಟಣ ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
ಅಫ್ಘಾನಿಸ್ತಾನ: ಗುಂಡಿನ ದಾಳಿಗೆ ತಾಲಿಬಾನ್ ಕಮಾಂಡರ್, ಆತನ ಪುತ್ರ ಸೇರಿ 6 ಮಂದಿ ಸಾವು
ಯಕ್ಷಗಾನ ಮುಗಿಸಿ ಮನೆಗೆ ತೆರಳುತ್ತಿದ್ದ ಕಲಾವಿದ ರಸ್ತೆ ಅಪಘಾತಕ್ಕೆ ಬಲಿ