ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಫಾಝಿಲ್ ಹತ್ಯೆ ಪ್ರಕರಣದ ಓರ್ವ ಆರೋಪಿಗೆ ಜಾಮೀನು
ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಮಂಗಳೂರು ನಗರದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಜುಲೈ 28ರಂದು ರಾತ್ರಿ ಸುರತ್ಕಲ್ ಜಂಕ್ಷನ್ ನಲ್ಲಿದ್ದ ಫಾಝಿಲ್ ನನ್ನು ತಂಡವೊಂದು ಕೊಲೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿತ್ ಗೆ ನ್ಯಾಯಾಲಯವು ಸೆಪ್ಟೆಂಬರ್ 7ರಂದು ಜಾಮೀನು ಮಂಜೂರು ಮಾಡಿದ್ದು, ಸೆಪ್ಟೆಂಬರ್ 13ರಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.
ಜುಲೈ 28ರಂದು ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು ಭೇಟಿ ಮಾಡಿ ಅಂಗಡಿಯಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೈಗೈದಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka