ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ವಿರೋಧಿಸಿ ಪ್ರತಿಭಟನೆ
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ಜಾರಿ ಮಾಡಿದ ಪೊಲೀಸ್ ಕ್ರಮವನ್ನು ಖಂಡಿಸಿ, ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ನ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ , ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಸಿಪಿಐನ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ಹೋರಾಟಗಾರ ಎಂ.ಜಿ ಹೆಗಡೆ, ಡಿಎಸ್ ಎಸ್ ನ ಹಿರಿಯ ಮುಖಂಡರಾದ ಎಂ. ದೇವದಾಸ್, ರಘು ಎಕ್ಕಾರ್, ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಜೆಡಿಎಸ್ ಜಿಲ್ಲಾ ಮುಖಂಡರಾದ ಅಲ್ತಫ್ ತುಂಬೆ , ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಅಝೀಝ್ , ಸಿಪಿಐಎಂ ಜಿಲ್ಲಾ ಮುಖಂಡರಾದ ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ಸಿಪಿಐ ನ ವಿ ಕುಕ್ಯಾನ್, ಸೀತರಾಮ್ ಬೇರಿಂಜೆ, ಕರುಣಾಕರ್, ಸುರೇಶ್, ಸಾಮರಸ್ಯ ಮಂಗಳೂರು ಸಮರ್ಥ್ ಭಟ್, ಕಾಂಗ್ರೇಸ್ ಕಾರ್ಮಿಕ ಸಂಘಟನೆಯ ಮುಖಂಡರಾದ ಲಾರೆನ್ಸ್, ಡಿವೈಎಫ್ಐ ಮುಖಂಡರಾದ ನವೀನ್ ಕೊಂಚಾಡಿ, ರಫೀಕ್ ಹರೇಕಳ, ಸಾಧಿಕ್ ಕಣ್ಣೂರು, ಮನೋಜ್ ಉರ್ವಸ್ಟೋರ್, ಜಗದೀಶ್ ಬಜಾಲ್, ದಲಿತ ಹಕ್ಕುಗಳ ಸಮಿತಿಯ ತಿಮ್ಮಯ್ಯ ಕೊಂಚಾಡಿ, ಜೆಎಮ್ ಸ್ ಜಿಲ್ಲಾ ಮುಖಂಡರಾದ ಪ್ರಮಿಳಾ ದೇವಾಡಿಗ, ಭಾರತೀ ಬೋಳಾರ, ಪ್ರಮೀಳಾ ಶಕ್ತಿನಗರ, ಅಸುಂತ ಡಿಸೋಜ, ಸಿಐಟಿಯು ಮುಖಂಡರುಗಳಾದ ಮುಸ್ತಫ ಕಲ್ಲಕಟ್ಟೆ, ವಿಲ್ಲಿ ವಿಲ್ಸನ್, ಮೀನುಗಾರರ ಸಂಘದ ಮುಖಂಡರಾದ ತಯ್ಯೂಬ್ ಬೆಂಗರೆ , ನೌಶದ್ ಬೆಂಗರೆ, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ, ವಿದ್ಯಾರ್ಥಿ ಜನತಾದಳದ ಬಿಲಾಲ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಸ್ವಾಗತಿಸಿ ನಿರೂಪಿಸಿದರು ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ವಂದಿಸಿದರು.
Video: ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka