ಜಲೀಲ್ ಹತ್ಯೆ ಹಿನ್ನೆಲೆ: ಸುರತ್ಕಲ್ ನಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಡಿ25 ಬೆಳಿಗ್ಗೆ 6 ರಿಂದ 27ರ ಬೆಳಿಗ್ಗೆ 6 ರವರೆಗೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಲ್ಲದೇ ಈ ಎಲ್ಲಾ ಪ್ರದೇಶಗಳಲ್ಲಿರುವ ಮದ್ಯದಂಗಡಿ ಹಾಗೂ ಮದ್ಯ ಮಾರಾಟವನ್ನು ಡಿ.25 ಬೆಳಿಗ್ಗೆ 10 ರಿಂದ ಡಿ.27 ಬೆಳಿಗ್ಗೆ 10 ಗಂಟೆಯವರೆಗೆ ಮುಚ್ಚುವಂತೆ ತಿಳಿಸಲಾಗಿದೆ. ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕರ್ತವ್ಯ ನಿರ್ವಹಿಸುವವರು ಡಿ.25 ಹಾಗೂ 26 ರಂದು ಸಂಜೆ 6 ಗಂಟೆಯವರೆಗೆ ಮಾತ್ರ ಕರ್ತವ್ಯ ನಿರ್ವಹಿಸುವ ಬಗ್ಗೆಯೂ ತಿಳಿಸಲಾಗಿದೆ.
ರಾತ್ರಿ ಹೊತ್ತು ಯಾರೂ ಕೂಡ ತಿರುಗಾಡದಂತೆ ಮಂಗಳೂರು ನಗರ ಕಮೀಷನರ್ ಎನ್.ಶಶಿಕುಮಾರ್ ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw