ಅಮ್ಮನ ನಂತರ ಪುತ್ರಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ
ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ನವದೆಹಲಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಬಿಜೆಪಿ ಶನಿವಾರ ಪ್ರಕಟಿಸಿದೆ. ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರ ಬದಲಿಗೆ ಬಿಜೆಪಿ ನಾಯಕಿ ಬಾನ್ಸುರಿ ಸ್ವರಾಜ್ ಸ್ಪರ್ಧಿಸಲಿದ್ದು ಇವರು ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಹೇಳಿದ್ದಾರೆ.
‘ಅಬ್ ಕಿ ಬಾರ್ 400 ಪಾರ್’ ಸಂಕಲ್ಪದೊಂದಿಗೆ, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ‘ಪ್ರಧಾನ ಸೇವಕ’ ಮಾಡಲು ಕೆಲಸ ಮಾಡುತ್ತಾರೆ” ಎಂದು ಸುಷ್ಮಾ ಸ್ವರಾಜ್ ಸುದ್ದಿ ಸಂಸ್ಥೆ ಎಎನ್ಐಗೆ ಹೇಳಿಕೆ ನೀಡಿದ್ದಾರೆ.
ವಿಶೇಷವೆಂದರೆ, ದಕ್ಷಿಣ ದೆಹಲಿಯ ಬಿಜೆಪಿಯ ಹಾಲಿ ಸಂಸದ ರಮೇಶ್ ಬಿಧುರಿ ಮತ್ತು ನವದೆಹಲಿಯ ಸಂಸದೆ ಮೀನಾಕ್ಷಿ ಲೇಖಿ ಅವರನ್ನು ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth