ತರಬೇತಿಗೆ ಹಾಜರಾಗದೇ ಪೇಪರ್ ಓದುತ್ತಾ ಕುಳಿತಿದ್ದ ಮಹಿಳಾ ಇನ್ಸ್ ಪೆಕ್ಟರ್‌ ಅಮಾನತು! - Mahanayaka
1:16 AM Thursday 12 - December 2024

ತರಬೇತಿಗೆ ಹಾಜರಾಗದೇ ಪೇಪರ್ ಓದುತ್ತಾ ಕುಳಿತಿದ್ದ ಮಹಿಳಾ ಇನ್ಸ್ ಪೆಕ್ಟರ್‌ ಅಮಾನತು!

police suspended
09/05/2023

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ  2023 ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್‌ ವೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಮಹಿಳಾ ಇನ್‌ ಸ್ಪೆಕ್ಟರ್‌ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗಿತ್ತು. ತರಬೇತಿ ಪಡೆಯುವ ಸಂದರ್ಭದಲ್ಲಿ ಉದ್ಧಟತನ ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ.

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್‌ ತರಬೇತಿಗೆ ಹಾಜರಾಗದೇ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ