ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಸಿತೇ ಸುವರ್ಣ ನ್ಯೂಸ್?

ಬೆಂಗಳೂರು: ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯನ್ನು ಪ್ರಸಾರ ಮಾಡುವ ವೇಳೆ ಖಾಸಗಿ ಸುದ್ದಿವಾಹಿನಿ ಸುವರ್ಣ ನ್ಯೂಸ್ ಭಾರತ ಹಾಗೂ ಪಾಕಿಸ್ತಾನದ ಧ್ವಜ ಬಳಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ವರದಿ ದೇಶದಲ್ಲಿ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ.
ಈ ನಡುವೆ ಸುವರ್ಣ ವಾಹಿನಿಯಲ್ಲಿ ಹಿಂದೂಗಳ ಜನ ಸಂಖ್ಯೆಗೆ ಭಾರತದ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಸಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಆ್ಯಂಕರ್ ಅಜಿತ್ ಹನುಮಕ್ಕನವರ್ ಅವರು ಜನಸಂಖ್ಯಾ ವರದಿಯ ಬಗ್ಗೆ ಚರ್ಚಿಸುತ್ತಿರುವ ವೇಳೆ 20 ಕೋಟಿ ಭಾರತೀ ಮುಸ್ಲಿವರನ್ನು ಹೀಗೆ ಚಿತ್ರೀಕರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು, ಆ್ಯಂಕರ್ ಹಾಗೂ ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
India flag for Indian Hindus and
Pakistan flag for Indian Muslims.This is how @AsianetNewsSN and its Anchor Ajit Hanumakkanavar portrayed 20 crore Indian Muslims while discussing the EAC-PM report. Hope organisations in Karnataka register a complaint against the Anchor and… pic.twitter.com/OVFB8MAoF5
— Mohammed Zubair (@zoo_bear) May 10, 2024
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth