ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಆಸೆ, ಆಮಿಷವೊಡ್ಡಿ ಇಲ್ಲವೇ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ ಇದೆ. ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇತ್ತೀಚೆಗೆ ನಾನು ಕಲಬುರಗಿ ಸೇರಿದಂತೆ ಮತ್ತಿತರ ಕಡೆ ಭೇಟಿ ನೀಡಿದಾಗ ಕೆಲವು ಕಡೆ ಮತಾಂತರವಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಬಲವಂತವಾಗಿ ಮತಾಂತರವಾಗುವುದನ್ನು ತಡೆಗಟ್ಟಲು ಜಿಲ್ಲಾಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ರೀತಿಯ ಆರೋಪ ರಾಜ್ಯದಲ್ಲಿ ಇದು ಪದೇ ಪದೇ ಕೇಳಿ ಬರುತ್ತಲೇ ಇದೆ. ಇದಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ಅಗತ್ಯವಿರುವುದರಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ತಿಳಿಸಿದರು.
ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ. ತಾನು ಇಚ್ಛಿಸುವ ಧರ್ಮದಲ್ಲಿ ಬದುಕಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಬಲವಂತದ ಮತಾಂತರಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈಗಾಗಲೇ ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಅವಕಾಶ ಇಲ್ಲವಾದರೂ, ಬಿಜೆಪಿಯು ಮತಾಂತರ ನಿಷೇಧ ಕಾಯ್ದೆ ಎಂಬ ವಿಚಾರವನ್ನು ಈ ಬಾರಿ ರಾಜಕೀಯಗೊಳಿಸಲು ಮುಂದಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ: ಕಠಿಣ ಕಾನೂನು ಕ್ರಮಕ್ಕೆ ಡಿವೈಎಫ್ ಐ ಒತ್ತಾಯ
19 ತಿಂಗಳ ರಜೆಯ ಬಳಿಕ 1ರಿಂದ 5ನೇ ತರಗತಿವರೆಗೆ ಶಾಲಾರಂಭದ ಸುಳಿವು!
ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವೆ ಜೊಲ್ಲೆ ವಿರುದ್ಧ ತಿರುಗಿ ಬಿದ್ದ ಗೋಮಾತೆ | ಸಚಿವರಿಗೆ ತಿವಿಯಲು ಯತ್ನ
ಕಡಬ: ಕಾನ್ ಸ್ಟೇಬಲ್ ನಿಂದ ಅತ್ಯಾಚಾರ ಪ್ರಕರಣ | ಇಂದು ನಡೆದ ಬೆಳವಣಿಗೆಗಳೇನು?
ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ
ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ
ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು