ಶ್ವಾನದಳದ ಸದಸ್ಯೆ ಜ್ವಾಲಾ ಕಿಡ್ನಿ ವೈಫಲ್ಯದಿಂದ ನಿಧನ
ದಕ್ಷಿಣ ಕನ್ನಡದಲ್ಲಿ ಈ ಹಿಂದೆ ನಡೆದ ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆಯಾಗಿದ್ದ ಜ್ವಾಲಾ ಕಿಡ್ನಿ ವೈಫಲ್ಯಕ್ಕೊಳಗಾಗಿ ಸಾವಿಗೀಡಾಗಿದೆ.
ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನದ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ಕುಶಾಲ ತೋಪು ಸಿಡಿಸುವ ಮೂಲಕ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಸೋನಾವಣೆ ಮತ್ತಿತರ ಅಧಿಕಾರಿ, ಸಿಬ್ಬಂದಿಯ ಸಮ್ಮುಖ ಗೌರವ ವಂದನೆ ಸಲ್ಲಿಸಲಾಯಿತು.
ಡಾಬರ್ ಮೆನ್ ಪಿಂಚರ್ ಜಾತಿಗೆ ಸೇರಿದ ಜ್ವಾಲಾ 2015ರ ಫೆಬ್ರವರಿ 27ರಂದು ಜನಿಸಿತ್ತು. ಅಪರಾಧ ಪತ್ತೆ ಶ್ವಾನವಾಗಿ ಪೊಲೀಸ್ ಇಲಾಖೆಯಲ್ಲಿ ಏಳು ವರ್ಷ ಹತ್ತು ತಿಂಗಳು ಕರ್ತವ್ಯ ನಿರ್ವಹಿಸಿತ್ತು. ಪೊಲೀಸ್ ಇಲಾಖೆಯ ಕುಮಾರ ಕತ್ಲೇರ ಈ ಶ್ವಾನದ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw