ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್ - Mahanayaka
10:16 AM Thursday 12 - December 2024

ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

crime news
29/11/2021

ಮೈಸೂರು: 17 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು, ಈ ಬಗ್ಗೆ ಆಕೆಯ ಬಳಿಯಲ್ಲಿ ವಿಚಾರಿಸಿದಾಗ ಆಕೆಯ ಅಣ್ಣನೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಮೈಸೂರಿನ ನಗರದ ಬಡಾವಣೆಯೊಂದರ 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಈ ದುಷ್ಕೃತ್ಯ ನಡೆಸಿದ್ದಾನೆ. ತಂದೆ ಹಾಗೂ ತಾಯಿ ಇಬ್ಬರನ್ನು ಕಳೆದುಕೊಂಡಿದ್ದ ಬಾಲಕಿ ತನ್ನ ಇಬ್ಬರು ಅಣ್ಣಂದಿರ ಜೊತೆಗೆ ವಾಸವಿದ್ದಳು. ಈ ಪೈಕಿ ಓರ್ವ ಅಣ್ಣ ತನ್ನ ಸ್ವಂತ ತಂಗಿಯ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ ಎಂದು ವರದಿಯಾಗಿದೆ.

ಶನಿವಾರ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದೆ. ಈ ವೇಳೆ ಬಾಲಕಿಯನ್ನು ಪ್ರಶ್ನಿಸಿದಾಗ ತನ್ನ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿಸಿದ್ದಾಳೆ. ಅಣ್ಣಂದಿರ ಪೈಕಿ ಓರ್ವ ದಿನ ನಿತ್ಯ ಮದ್ಯ ಸೇವಿಸಿ ಬರುತ್ತಿದ್ದು, ತಂಗಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ವರದಿಯಾಗಿದೆ.

ಬಾಲಕಿಯ ಹೇಳಿಕೆಯನ್ನು ಆಧರಿಸಿ ಸದ್ಯ ಆರೋಪಿ ಅಣ್ಣನನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇದೆಯಾ? | ಸಚಿವ ಸುಧಾಕರ್ ನೀಡಿದ ಖಡಕ್ ಎಚ್ಚರಿಕೆ ಏನು?

ಚಿಕ್ಕಬಳ್ಳಾಪುರದಲ್ಲೊಂದು ವಿಶೇಷ ಮದುವೆ: ಗಮನ ಸೆಳೆದ ವಿಶೇಷ ಜೋಡಿ

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ: ಸರ್ಕಾರವನ್ನು ತರಾಟೆಗೆತ್ತಿಕೊಳ್ಳಲು ವಿಪಕ್ಷಗಳು ಸಜ್ಜು

ಶಾಕ್ ನೀಡಿದ ಜಿಯೋ: ಏರ್ಟೆಲ್ ವೊಡಾಫೋನ್ ಬಳಿಕ ಜಿಯೋ ರೀಚಾರ್ಜ್ ದರ ಏರಿಕೆ

ಇತ್ತೀಚಿನ ಸುದ್ದಿ