ಸ್ವಪಕ್ಷೀಯರ ಮೇಲೆಯೇ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ | ದೆಹಲಿ ಭೇಟಿಯ ಬಳಿಕ ವಿಡಿಯೋ ಬಿಡುಗಡೆ?

ramesh jarakiholi
29/06/2021

ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಸಿಡಿ ಪ್ರಕರಣದ ಬಳಿಕ ಹೊಡೆತಗಳ ಮೇಲೆ ಹೊಡೆತಗಳನ್ನು ತಿನ್ನುತ್ತಿರುವ ರಮೇಶ್ ಜಾರಕಿಹೊಳಿ ಇದೀಗ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.

ದೆಹಲಿಗೆ ಇತ್ತೀಚೆಗಷ್ಟೆ ಮುಂಬೈಗೆ ಭೇಟಿ ನೀಡಿದ್ದ ಅವರು ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೆಹಲಿಗೆ ದಿಢೀರ್ ಆಗಿ ಭೇಟಿ ನೀಡಿರುವ ರಮೇಶ್ ಜಾರಕಿಹೊಳಿ, ತನ್ನ ವಿರುದ್ಧ ಯಾರು ಸಂಚು ಮಾಡಿದ್ದಾರೆ ಎಂಬ ಬಗ್ಗೆ ಮಾತನಾಡಿದ್ದಾರೆ ಎನ್ನುವ ವಿಚಾರ ಇದೀಗ ಕೇಳಿ ಬಂದಿದೆ.

ವರದಿಗಳ ಪ್ರಕಾರ, ತನ್ನ ಮೇಲೆ ಸ್ವಪಕ್ಷದವರೇ ಪಿತೂರಿ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಇದ್ದುಕೊಂಡೇ ಬಿಜೆಪಿಯ ಮೂವರು ಷಡ್ಯಂತ್ರ ನಡೆಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎಂದು  ಹೇಳಲಾಗಿದೆ.

ದೆಹಲಿಯಲ್ಲಿ ನಾನು ಯಾರನ್ನು ಭೇಟಿಯಾಗುತ್ತೇನೆ ಎನ್ನುವುದನ್ನು ಹೇಳುವುದಿಲ್ಲ. ಆದರೆ ನಾನು ಭೇಟಿಯಾದ ಬಳಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದು, ಈ ವಿಡಿಯೋ ನೀವು ನೋಡಿದರೆ, ಎಲ್ಲರೂ ಶಾಕ್ ಆಗ್ತೀರಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

Exit mobile version