ಸ್ವಾತಂತ್ರ್ಯ ರಥ ತಡೆದು ಪ್ರತಿಭಟಿಸಿದ ಎಸ್ ಡಿಪಿಐ ಕಾರ್ಯಕರ್ತರು | ಸಾರ್ವರ್ಕರ್ ಫೋಟೋಗೆ ಬಳಸಿದ್ದಕ್ಕೆ ವಿರೋಧ - Mahanayaka
8:11 PM Wednesday 11 - December 2024

ಸ್ವಾತಂತ್ರ್ಯ ರಥ ತಡೆದು ಪ್ರತಿಭಟಿಸಿದ ಎಸ್ ಡಿಪಿಐ ಕಾರ್ಯಕರ್ತರು | ಸಾರ್ವರ್ಕರ್ ಫೋಟೋಗೆ ಬಳಸಿದ್ದಕ್ಕೆ ವಿರೋಧ

kadaba sdpi protest
15/08/2021

ಪುತ್ತೂರು: ಕಡಬ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥದಲ್ಲಿ ಸಾರ್ವರ್ಕರ್ ಅವರ ಚಿತ್ರ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಎಸ್ ಡಿಪಿಐ ಕಾರ್ಯಕರ್ತರು ರಥವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಕಡಬಿ ಗ್ರಾಮ ಪಂಚಾಯತ್ ವತಿಯಿಂದ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ  ರಥ ಯಾತ್ರೆಯಲ್ಲಿ ಟಿಪ್ಪು ಸುಲ್ತಾನ್ ಭಾವ ಚಿತ್ರವನ್ನು ಕೂಡ ಬಳಸಬೇಕು ಎಂದು ಎಸ್ ಡಿಪಿಐ ಕಾರ್ಯಕರ್ತರು ಒತ್ತಾಯಿಸಿದರು ಎಂದು ವರದಿಯಾಗಿದೆ.

ಎಸ್ ಡಿಪಿಐ ಕಾರ್ಯಕರ್ತರ ದಿಢೀರ್ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಇನ್ನೂ ಈ ಸಂಬಂಧ ಗ್ರಾಮ ಪಂಚಾಯತ್ ನೀಡಿದ ದೂರಿನಂತೆ ಮೂವರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪಂಚಾಯತ್ ಕಚೇರಿಗೆ ಶಾಸಕ ಸಂಜೀವ ಮಠಂದೂರು ಭೇಟಿ

ಇನ್ನೂ ಘಟನೆ ಸಂಬಂಧ  ಕಡಬ ಗ್ರಾಮ ಪಂಚಾಯತ್ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು, ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು ಎಂದು ಹೇಳಿದ್ದಾರೆ.

ಸಾರ್ವರ್ಕರ್ ಫೋಟೋ ತೆಗೆಯಲು ಆಗ್ರಹಿಸಿದ್ದ ಎಸ್ ಡಿಪಿಐ

ಸ್ವಾತಂತ್ರ್ಯ ರಥದಿಂದ  ವೀರ ಸಾರ್ವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಎಸ್ ಡಿಪಿಐ ಕಾರ್ಯಕರ್ತರು ಆಗ್ರಹಿಸಿ ಪ್ರತಿಭಟಿಸಿದ್ದು ಎಂದು ಹೇಳಲಾಗಿದೆ. ಸದ್ಯ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಲಾಗಿರುವ ಆರೋಪದಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸಲು, ಆರೋಪಿಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದ ಸಿ.ಟಿ.ರವಿ

ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ WWE ಸೂಪರ್ ಸ್ಟಾರ್ ಗಳು

ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ

ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ಮೂವರ ಮೇಲೆ ಪ್ರವಹಿಸಿದ ವಿದ್ಯುತ್: ಓರ್ವ ಬಾಲಕನ ದಾರುಣ ಸಾವು

ಸ್ವಾತಂತ್ರ್ಯ ದಿನಾಚರಣೆ: ಗಾಂಧಿ, ಭಗತ್ ಸಿಂಗ್, ಅಂಬೇಡ್ಕರರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ

ಎಸ್ ಸಿ-ಎಸ್ ಟಿಗಳ ಜಾತಿ ನಿಂದನೆ ಮಾಡಿದ ನಟಿ ಅರೆಸ್ಟ್: ಬಂಧನದ ವೇಳೆ ನಟಿಯಿಂದ ಹೈಡ್ರಾಮಾ

ಇತ್ತೀಚಿನ ಸುದ್ದಿ