ಸ್ವಿಗ್ಗಿ ಸಂಸ್ಥೆ ಡೆಲಿವರಿ ಬಾಯ್ಸ್ ಮುಷ್ಕರ: ಸಂಧಾನ ಸಭೆ
03/09/2022
ಸ್ವಿಗ್ಗಿ ಸಂಸ್ಥೆ ಅಳವಡಿಸಿದ ಕೆಲವೊಂದು ನಿಯಮದ ವಿರುದ್ಧ ಡೆಲಿವರಿ ಬಾಯ್ಸ್ ಮುಷ್ಕರ ನಡೆಸುತ್ತಿದ್ದು, ಶನಿವಾರ ಶಾಸಕ ಕೆ.ರಘುಪತಿ ಭಟ್ ಅವರು ಸ್ವಿಗ್ಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ಡೆಲಿವರಿ ಬಾಯ್ಸ್ ಜೊತೆ ಸಂಧಾನ ಸಭೆ ನಡೆಸಿದರು.
ಸಂಸ್ಥೆಯ ಕೆಲವೊಂದು ತಾಂತ್ರಿಕ ಸಮಸ್ಯೆಗಳ ಬಗ್ಗೆ ಡೆಲಿವರಿ ಮಾಡುವ ಹುಡುಗರು ಸಭೆಯಲ್ಲಿ ಗಮನಕ್ಕೆ ತಂದರು. ಇದನ್ನು ಶೀಘ್ರದಲ್ಲಿ ಸರಿಪಡಿಸುವಂತೆ ಸ್ವಿಗ್ಗಿ ಸಂಸ್ಥೆಯ ಅಧಿಕಾರಿಗಳಿಗೆ ಶಾಸಕ ರಘುಪತಿ ಭಟ್ ಅವರು ಸೂಚಿಸಿ ಮುಷ್ಕರವನ್ನು ಕೈ ಬಿಡುವಂತೆ ಡೆಲಿವರಿ ಬಾಯ್ಸ್ ಅವರಲ್ಲಿ ವಿನಂತಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka