ಜಲೀಲ್ ಹತ್ಯೆಯನ್ನು ಖಂಡಿಸಿ SYS—SSF ವತಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದವರ ಕುಟುಂಬಗಳಿಗೆ ಪರಿಹಾರ ನೀಡಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈಎಸ್–ಎಸೆಸ್ಸೆಫ್ ವತಿಯಿಂದ ಮಂಗಳವಾರ ಸಂಜೆ ಮಂಗಳೂರು ನಗರದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು.
ಕೊಲೆಯಾದ ಫಾಝಿಲ್, ಜಲೀಲ್ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು. ಹತ್ಯೆಯಾದ ಜಲೀಲ್ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಕೊಲೆ ಪ್ರಕರಣದ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಮತ್ತು ಅವರ ವಿರುದ್ಧ ಜಾಮೀನು ಸಿಗದಂತಹ ಕಠಿಣ ಸೆಕ್ಷನ್ ವಿಧಿಸಬೇಕು. ಅಪರಾಧ ಕೃತ್ಯ ಎಸಗಿದ ಆರೋಪಿಗಳು ರಾಜಾರೋಷವಾಗಿ ತಿರುಗಾಡುವುದನ್ನು ನಿಲ್ಲಿಸಬೇಕು ಎಂದು ಈ ಸಂದರ್ಭ ಹಕ್ಕೊತ್ತಾಯ ಮಂಡಿಸಲಾಯಿತು.
ಎಸೆಸ್ಸೆಫ್ ಮುಖಂಡ ಮುಹಮ್ಮದ್ ನವಾಝ್ ಸಖಾಫಿ ಅಡ್ಯಾರ್ ಪದವು ಹಕ್ಕೊತ್ತಾಯ ಸಭೆಯನ್ನು ಉದ್ಘಾಟಿಸಿದರು. ಎಸ್‌ವೈಎಸ್ ಮುಖಂಡ ಸಿಎಚ್ ಮುಹಮ್ಮದಲಿ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡ ಅಶ್ರಫ್ ಕಿನಾರ ಸ್ವಾಗತಿಸಿದರು.
ಎಸೆಸ್ಸೆಫ್ ರಾಷ್ಟ್ರೀಯ ನಾಯಕ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ಬುಲ್ ಹಮೀದ್ ಬಜ್ಪೆ, ಎಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ಎಸ್‌ಜೆಯು ನಾಯಕ ಹಾಫಿಳ್ ಯಾಕೂಬ್ ಸಅದಿ ನಾವೂರು, ಎಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಬಶೀರ್ ಮದನಿ ಕೂಳೂರು ಮಾತನಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka