ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ
ಬೆಂಗಳೂರು: ಹಲವು ದಿನಗಳಿಂದ ವೆಂಟಿಲೇಟರ್ ನಲ್ಲಿದ್ದ ಕನ್ನಡ ಚಿತ್ರರಂಗದ 80 ವರ್ಷ ವಯಸ್ಸಿನ ಹಿರಿಯ ನಟ ಟಿ.ಎಸ್.ಲೋಹಿತಾಶ್ವ ಮಂಗಳವಾರ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka