ಬೆಂಗಳೂರು: ಜನರು ಲಾಕ್ ಡೌನ್ ಪಾಲನೆ ಮಾಡುತ್ತಿಲ್ಲ, ಅನಗತ್ಯವಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲು ಗೃಹ ಇಲಾಖೆ ಸಜ್ಜಾಗಿದೆ. ಅನಗತ್ಯವಾಗಿ ಓಡಾಡುತ್ತಿರುವವರ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲ...