ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮತ್ತೊರ್ವ ಯುವಕ ಮೃತಪಟ್ಟಿದ್ದಾನೆ. ಮಹೇಂದ್ರ (18) ಮೃತ ಯುವಕ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಹೇಂದ್ರ, ಅಂದು ಎಸ್ವಿಟಿ ಬಸ್ನ ಟಾಪ್ ಮೇಲೆ ಕುಳಿತು ಸಂಚಾರ ಮಾಡುತ...