ಮುಂಬೈ: ಬಾಲಿವುಡ್ನ ಹಿರಿಯ ಗಾಯಕ, ಸಂಗೀತ ನಿದೇರ್ಶಕ ಬಪ್ಪಿ ಲಹರಿ ಅನಾರೋಗ್ಯದಿಂದಾಗಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಒಂದು ತಿಂಗಳಿಂದ ಮುಂಬೈನ ಜುಹುವಿನಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಸೋಮವಾರವಷ್ಟೇ ಡಿಸ್ಚಾರ್ಜ್ ಆಗಿದ್ದರು. ಮನೆಗೆ ತೆರಳಿದ ನಂತರ ಮಂಗಳವಾರ ಮತ್ತೆ ಅವರ ಆರ...