‘ತಾಲಿಬಾನಿ ಬಿಜೆಪಿ’ ಭಾರತವನ್ನು ಆಳಲು ಸಾಧ್ಯವಿಲ್ಲ | ಮಮತಾ ಬ್ಯಾನರ್ಜಿ ಕಿಡಿ

ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಅಫ್ಗಾನಿಸ್ತಾನವನ್ನು ಆಕ್ರಮಿಸಿಕೊಂಡು ಆಡಳಿತ ನಡೆಸುತ್ತಿರುವ ತಾಲಿಬಾನ್‌ಗೆ ಹೋಲಿಸಿದ್ದು, ನಮ್ಮ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕಿದೆ. ‘ತಾಲಿಬಾನಿ ಬಿಜೆಪಿ’ ಭಾರತವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಷೇಕ್ಸ್ ಪಿಯರ್ ಸಾರಣೀಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ ಬಿಜೆಪಿಯನ್ನು ಸೋಲಿಸಲು ತೃಣಮೂಲ ಕಾಂಗ್ರೆಸ್ ಒಂದೇ ಸಾಕು. ‘ಖೇಲಾ’ ಭವಾನಿಪುರದಿಂದ ಆರಂಭಗೊಳ್ಳಲಿದೆ ಮತ್ತು ಸಂಪೂರ್ಣ ರಾಷ್ಟ್ರದಲ್ಲಿ ಜಯ ಗಳಿಸುವ ಮೂಲಕ ಅಂತಿಮಗೊಳ್ಳಲಿದೆ ಎಂದು ಹೇಳಿದ್ದಾರೆ.
ರೋಮ್ ನಲ್ಲಿ ವಿಶ್ವ ಶಾಂತಿಯ ಕುರಿತು ಒಂದು ಸಭೆ ಇತ್ತು. ಅಲ್ಲಿಗೆ ನನ್ನನ್ನು ಆಹ್ವಾನಿಸಲಾಯಿತು. ಜರ್ಮನ್ ಚಾನ್ಸಲರ್, ಪೋಪ್ (ಫ್ರಾನ್ಸಿಸ್) ಕೂಡ ಭಾಗವಹಿಸಲಿದ್ದಾರೆ. ನನಗೆ ಹಾಜರಾಗಲು ಇಟಲಿ ವಿಶೇಷ ಅನುಮತಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಇದೇ ಸಂದರ್ಭದಲ್ಲಿ ಮಮತಾ ಆರೋಪಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಶಾಕಿಂಗ್ ನ್ಯೂಸ್: ಹುಟ್ಟು ಹಬ್ಬದ ಪಾರ್ಟಿಗೆ ಆಗಮಿಸಿದ್ದ ಮಹಿಳಾ ಪೊಲೀಸ್ ಮೇಲೆ ಸಾಮೂಹಿಕ ಅತ್ಯಾಚಾರ
ಕಿತ್ತು ತಿನ್ನುವ ಬಡತನ, ಉದ್ಯೋಗವೂ ಇಲ್ಲ | ನೊಂದ ಅಣ್ಣ ತಮ್ಮ ಆತ್ಮಹತ್ಯೆಗೆ ಶರಣು
ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ
ಆಟಿಕೆ ಗನ್ ತೋರಿಸಿ ಕಾರನ್ನೇ ಅಪಹರಿಸಿದ್ದ ಐವರು ಅರೆಸ್ಟ್!
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಕ್ಯಾಂಪಸ್ ಫ್ರಂಟ್ ತಹಶೀಲ್ದಾರ್ ಕಚೇರಿಗೆ ಮಾರ್ಚ್
ರಸ್ತೆ ಬದಿಯ 10 ಟನ್ ಸ್ಫೋಟಕ ತುಂಬಿದ್ದ ಲಾರಿ ನಿಂತದ್ದು ಕಂಡು ಬೆಚ್ಚಿಬಿದ್ದ ಜನರು!