ತಮಿಳಿನ ಹಿರಿಯ ನಟ ಡೆಲ್ಲಿ ಗಣೇಶ್ ನಿಧನ

ಚೆನ್ನೈ: ತಮಿಳಿನ ಹಿರಿಯ ನಟ ಡೆಲ್ಲಿ ಗಣೇಶ್ ಅವರು ವಯೋಸಹಜ ಕಾಯಿಲೆಯಿಂದ ಚೆನ್ನೈನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರ ಸಾವಿನ ಬಗ್ಗೆ ಪುತ್ರ ಮಹದೇವನ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.
80 ವರ್ಷದ ಡೆಲ್ಲಿ ಗಣೇಶ್ ತಮ್ಮ ಜೀವನ ಪ್ರಯಾಣವನ್ನು ಕೊನೆಗೊಳಿಸಿದ್ದಾರೆ. ಭಾರತೀಯ ವಾಯು ಸೇನೆಯಲ್ಲಿ ದಶಕಗಳ ಕಾಲ ಡೆಲ್ಲಿ ಗಣೇಶ್ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಸಿನಿಮಾ ಕ್ಷೇತ್ರದಲ್ಲಿ ಅತ್ಯುತ್ತಮ ಪೋಷಕ ನಟರಾಗಿ ಮಿಂಚಿದ್ದರು.
ಡೆಲ್ಲಿ ಗಣೇಶ್ ಅವರ ಅಂತಿಮ ಕ್ರಿಯೆಯು ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಡೆಲ್ಲಿ ಗಣೇಶ್ ಅವರು ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ 400 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ನಾಯಕನ್, ಮೈಕಲ್ ಮದನ ಕಾಮ ರಾಜನ್, ಸಿಂಧು ಭೈರವಿ, ಇರುವರ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: