ಆಸ್ಪತ್ರೆಗೆ ದಾಖಲಾದ ತಮಿಳಿನ ಖ್ಯಾತ ನಟ ಸೂರ್ಯ! - Mahanayaka

ಆಸ್ಪತ್ರೆಗೆ ದಾಖಲಾದ ತಮಿಳಿನ ಖ್ಯಾತ ನಟ ಸೂರ್ಯ!

08/02/2021

ಚೆನ್ನೈ: ತಮಿಳುನಟ ಸೂರ್ಯ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಸ್ವತಃ ಸೂರ್ಯ ಅವರೇ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಕುರಿತು ಸ್ವತಃ ಸೂರ್ಯ ಅವರೇ ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿನ ಕುರಿತು ಎಚ್ಚರಿಕೆಯಿಂದಿರುವಂತೆ ಅವರು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ನಾನು ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಎಲ್ಲರೂ ಜಾಗ್ರತೆಯಿಂದಿರಿ. ಕೊರೊನಾ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ.  ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿಲ್ಲ. ನಾವು ಸುರಕ್ಷತೆಯ ಕಡೆಗೆ ಗಮನ ನೀಡಬೇಕು ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ