ವಧುವರರಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟು ಹಾಸ್ಯನಟ ನೀಡಿದ ಸಲಹೆ ಏನು ಗೊತ್ತಾ? - Mahanayaka
8:28 PM Wednesday 11 - December 2024

ವಧುವರರಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟು ಹಾಸ್ಯನಟ ನೀಡಿದ ಸಲಹೆ ಏನು ಗೊತ್ತಾ?

mayilsamy
19/08/2021

ಚೆನ್ನೈ: ಪೆಟ್ರೋಲ್ ಬೆಲೆ 100ರ ಗಡಿದಾಟಿ ಮುಂದೆ ಸಾಗುತ್ತಿದ್ದರೂ ಜನಸಾಮಾನ್ಯರ ಪರವಾಗಿ ಧ್ವನಿಯೆತ್ತುವ ಒಬ್ಬ ಸಿನಿಮಾ ನಟನೂ ಕರ್ನಾಟಕದಲ್ಲಿ ಕಾಣುತ್ತಿಲ್ಲ. ಇತ್ತ ತಮಿಳುನಾಡು ಸರ್ಕಾರ ಪೆಟ್ರೋಲ್ ಗೆ 3 ರೂಪಾಯಿಗಳನ್ನು ಇಳಿಕೆ ಮಾಡಿದೆ. ಆದರೂ ತಮಿಳು ಹಾಸ್ಯನಟರೊಬ್ಬರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಹೌದು… ! ತಮಿಳು ಹಾಸ್ಯ ನಟ ಮಯಿಲ್ ಸಾಮಿ ಅವರು ಈ ಪ್ರತಿಭಟನೆ ನಡೆಸಿದವರಾಗಿದ್ದಾರೆ. ವಿವಾಹ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ಐದು ಲೀಟರ್ ಪೆಟ್ರೋಲ್ ನ್ನು ವಧುವರರಿಗೆ ಗಿಫ್ಟ್ ಆಗಿ ನೀಡುವ ಮೂಲಕ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮೌನವಾಗಿದ್ದು ಕೊಂಡೇ ಪ್ರತಿಭಟನೆ ನಡೆಸಿದ್ದಾರೆ.

ಪೆಟ್ರೋಲ್ ನೀಡಿದ ಬಳಿಕ, ಹೊರಗಡೆ ಸುತ್ತಾಡಲು ಇದು ಬಹಳ ಅವಶ್ಯಕ ಇದನ್ನು ಭದ್ರವಾಗಿಟ್ಟುಕೊಂಡು ಉಪಯೋಗಿಸಿ ಎಂದು ಹೇಳಿ ವಧುವರರಿಗೆ ಮಯಿಲ್ ಸಾಮಿ ಶುಭ ಹಾರೈಸಿದ್ದಾರೆ. ಈ ಸಂದೇಶ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಪ್ರತಿಭಟನೆ ಹೆಚ್ಚಾಗುತ್ತಿದೆ. ಇದರ ಮೊದಲ ಭಾಗವಾಗಿ ನೂತನ ಸಿಎಂ ಎಂ.ಕೆ.ಸ್ಟಾಲಿನ್ ಅವರು, ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಇಳಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿರೋಧ ತೋರಿದ್ದಾರೆ. ಕಳೆದ ಚುನಾವಣೆಯ ಸಂದರ್ಭ ನಟ ವಿಜಯ್ ಸೈಕಲ್ ನಲ್ಲಿ ಮತದಾನ ಮಾಡಲು ಬಂದು ಪೆಟ್ರೋಲ್ ಬೆಲೆ ಏರಿಕೆಗೆ ಪ್ರತಿಭಟನೆ ತೋರಿದ್ದಾರೆ. ಇದೀಗ ಮಯಿಲ್ ಸಾಮಿ ಕೂಡ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿರೋಧ ತೋರಿದ್ದಾರೆ.

ಇನ್ನಷ್ಟು ಸುದ್ದಿಗಳು…

ರೈತ ಹೋರಾಟಗಾರರ ಬಗ್ಗೆ ಹಗುರವಾಗಿ ನಾಲಿಗೆ ಹರಿಬಿಟ್ಟ ಶೋಭಾ ಕರಂದ್ಲಾಜೆ ಜಿಲ್ಲೆಗೆ ಕಳಂಕ: ಕ್ಯಾಂಪಸ್ ಫ್ರಂಟ್

ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಯಾವ ದೇಶದಲ್ಲಿ ಆಶ್ರಯ ಪಡೆದಿದ್ದು ಗೊತ್ತಾ? | ಕೊನೆಗೂ ಬಯಲಾಯ್ತು ರಹಸ್ಯ

ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬವೇ ನಾಪತ್ತೆ! | ಆತಂಕದಲ್ಲಿ ಸಂಬಂಧಿಕರು

ತನ್ನ ಬಗ್ಗೆ ತಾನೇ ಪುಸ್ತಕ ಬರೆದುಕೊಂಡು ಸ್ವಾತಂತ್ರ್ಯ ಹೋರಾಟಗಾರನಾದ ಸಾರ್ವರ್ಕರ್ | ಶಾಫಿ ಬೆಳ್ಳಾರೆ

ಟ್ವಿಟರ್ ಬರ್ಡ್ ಫ್ರೈ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ರಾಹುಲ್ ಖಾತೆ ಲಾಕ್ ಗೆ ಆಕ್ರೋಶ

ಕಿಟಕಿಯಲ್ಲಿ ನೇತಾಡುತ್ತಾ ಲಸಿಕೆ ಪಡೆದ ವ್ಯಕ್ತಿ | “ಶಾರ್ಟ್ ಕಟ್ ಲಸಿಕೆ” ವಿಡಿಯೋ ವೈರಲ್

ಇತ್ತೀಚಿನ ಸುದ್ದಿ