ಶೂಟಿಂಗ್ ವೇಳೆ ನಟ ಪ್ರಕಾಶ್ ರೈಗೆ ಏಟು | ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಗೆ ಶಿಫ್ಟ್
ಹೈದರಾಬಾದ್: ನಟ ಪ್ರಕಾಶ್ ರೈ ಅವರು ಶೂಟಿಂಗ್ ವೇಳೆ ಬಿದ್ದು ಗಾಯಗೊಂಡಿದ್ದು, ಪರಿಣಾಮವಾಗಿ ಅವರು ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ತೆರಳುತ್ತಿದ್ದಾರೆ. ಶೂಟಿಂಗ್ ವೇಳೆ ಅವರಿಗೆ ಏಟು ತಗಲಿದ್ದು, ದೊಡ್ಡ ಅನಾಹುತವೊಂದರಿಂದ ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತಮಿಳುನಟ ಧನುಷ್ ಅಭಿನಯದ ಚಿತ್ರವೊಂದರಲ್ಲಿ ಪ್ರಮುಖಪಾತ್ರದಲ್ಲಿ ಪ್ರಕಾಶ್ ರೈ ನಟಿಸುತ್ತಿದ್ದು, ‘ತಿರುಚಿತ್ರಾಂಬಲಂ’ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿದೆ. ಇಂದು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಕಾಶ್ ರೈ ಆಯತಪ್ಪಿ ಬಿದ್ದಿದ್ದಾರೆ. ಹೀಗಾಗಿ ಅವರಿಗೆ ಗಾಯವಾಗಿದೆ. ತುರ್ತು ಚಿಕಿತ್ಸೆಯನ್ನು ಪಡೆದು ಬಳಿಕ ಶಸ್ತ್ರ ಚಿಕಿತ್ಸೆಗಾಗಿ ಅವರು ಹೈದರಾಬಾದ್ ಗೆ ತೆರಳಿದ್ದಾರೆ ಎಂದು ಸ್ವತಃ ಪ್ರಕಾಶ್ ರೈ ಅವರೇ ಟ್ವೀಟ್ ಮಾಡಿದ್ದಾರೆ.
ಇನ್ನೂ ಪ್ರಕಾಶ್ ರೈ ಅವರಿಗೆ ಅವರ ಸ್ನೇಹಿತ ಡಾ.ಗುರುವ ರೆಡ್ಡಿ ಅವರು ಚಿಕಿತ್ಸೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ರಕಾಶ್ ರೈ ಅವರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಸ್ನೇಹಿತರು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ
ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ!
ಮೊಘಲರ ಆಳ್ವಿಕೆಯ 600 ವರ್ಷಗಳ ಕಾಲ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು | ಸಿದ್ದರಾಮಯ್ಯ
ಹೂಗುಚ್ಛ, ಹಾರ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ | ಕನ್ನಡ ಪುಸ್ತಕ ಕೊಡಲು ಆದೇಶ
ಬಿಜೆಪಿಯಲ್ಲಿ ಅತೃಪ್ತಿಯ ಉರಿ: ದೆಹಲಿಯಲ್ಲಿ ಬೀಡು ಬಿಟ್ಟ ರಮೇಶ್ ಜಾರಕಿಹೊಳಿ ತಂಡ
11 ಬಾರಿ ಮೆದುಳಿನ ಶಸ್ತ್ರ ಚಿಕಿತ್ಸೆಗೊಳಪಟ್ಟಿದ್ದ ಖ್ಯಾತ ನಟಿಯನ್ನು ಬಲಿ ಪಡೆದ ಕೊವಿಡ್ 19